Breaking News

ಪ್ರೇಮ ವಿಚಾರಕ್ಕೆ ಕಲ್ಲು ತೂರಾಟ. ಮನೆ, ವಾಹನಗಳು ಧ್ವಂಸ, ಬಿಗುವಿನ ವಾತಾವರಣ

Spread the love

ಬೆಳಗಾವಿ: ಯುವಕ ಹಾಗೂ ಅಪ್ರಾಪ್ತ ಬಾಲಕಿಯ ನಡುವಿನ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಿದ್ದ ವ್ಯಕ್ತಿಯ ಮನೆಯ ಮೇಲೆ 25 ರಿಂದ 30 ಜನರ ಗುಂಪೊಂದು ಸೋಮವಾರ ರಾತ್ರಿ ಏಕಾಏಕಿ ದಾಳಿ ನಡೆಸಿ ಮನೆ ಧ್ವಂಸಗೊಳಿಸಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

 

ತಾಲೂಕಿನ ಕರ್ಲೆ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಹಾಗೂ ನಾವಗೆ ಗ್ರಾಮದ ಕಾಲೇಜು ಯುವಕನ ಮಧ್ಯೆ ಪ್ರೇಮಾಂಕುರವಾಗಿತ್ತು. ಈ ಇಬ್ಬರ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ನಾವಗೆ ಗ್ರಾಮದ ಮಾರುತಿ ಹುರಕಡ್ಲಿ ಎಂಬವರು ಪಂಚರಾಗಿ ಮಧ್ಯಸ್ಥಿಕೆ ವಹಿಸಿದ್ದರು. ಇದರಿಂದ ಕುಪಿತಗೊಂಡ ಕೆಲ ಯುವಕರ ಗುಂಪು ಹುರಕಡ್ಲಿ ಅವರ ಮನೆ ಮೇಲೆ ದಾಳಿ ನಡೆಸಿ, ವಾಹನಗಳು ಹಾಗೂ ಮನೆ ಧ್ವಂಸಗೊಳಿಸಿದೆ.

ಕಾರು ದ್ವಿಚಕ್ರ ವಾಹನ ಜಖಂಗೊಂಡಿದ್ದು, ಮನೆಯ ಕಿಟಕಿ, ಬಾಗಿಲುಗಳು ಧ್ವಂಸಗೊಂಡಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ