Breaking News

ಗುಂಡು ಹಾರಿಸಿಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Spread the love

ಬೆಂಗಳೂರು: ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿಕೊಂಡು (College Student Death) ಕಾಲೇಜು ವಿದ್ಯಾರ್ಥಿಯೊಬ್ಬ (commits suicide by shooting) ಮೃತಪಟ್ಟಿದ್ದಾನೆ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಕೊಡಗು ಮೂಲದ ವಿಶು ಉತ್ತಪ್ಪ (19) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಆರ್‌.ಆರ್ ಕಾಲೇಜುನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ನಿನ್ನ ಬುಧವಾರ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆಯ ಎಡಭಾಗದ ಹೃದಯದ ಮೇಲೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಮನೆಯಿಂದ ಹೊರ ಹೋಗಿದ್ದ ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ವಿಶು ತಂದೆ ರವಿ ತಮ್ಮಯ್ಯ ಅವರು ಮನೆಗೆ ಬಂದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗನನ್ನು ಕಂಡು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಒಂದು ಗಂಟೆಗಳ ಚಿಕಿತ್ಸೆ ಕೊಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಶು ಉತ್ತಪ್ಪ ಮೃತಪಟ್ಟಿದ್ದಾನೆ.

ಸದ್ಯ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೋಕೋ, ಎಫ್‌ಎಸ್‌ಎಲ್ ತಂಡಗಳಿಂದ ತನಿಖೆ ನಡೆಸುತ್ತಿದ್ದು, ವಿಶುವಿನ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ವಿಶು ತಂದೆ ರವಿ ತಿಮ್ಮಯ್ಯ ನೈಸ್ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ‌ ಮಾಡುತ್ತಿದ್ದಾರೆ. ತಂದೆಯ ಲೈಸೆನ್ಸ್ ಹೊಂದಿರುವ ಡಬ್ಬಲ್ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ.

 


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ