ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು.
ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು, ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿದೆ.ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ!: ಶ್ರೀಕಾಂತ್ ಪೂಜಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ ಶ್ರೀಕಾಂತ್‌ಗೆ ಬಿಡುಗಡೆ ಭಾಗ್ಯವಿಲ್ಲ