Breaking News

865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು,

Spread the love

ಬೆಳಗಾವಿ, : ಬೆಳಗಾವಿ (Belagavi)ಗಡಿ ವಿವಾದವನ್ನು ಜೀವಂತವಾಗಿ ಇಡಲು ಮಹಾರಾಷ್ಟ್ರ (Maharashtra) ಪ್ರಯತ್ನಿಸುತ್ತಲೇ ಇದೆ. ಇದೀಗ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ (Dhairyashil mane) ಬೆಳಗಾವಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಗಡಿ ವಿವಾದ ಹೋರಾಟ ಸುಪ್ರೀಂಕೋರ್ಟ್​ನಲ್ಲಿದೆ. ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬರೀ ಹೇಳಿಕೆ ಕೊಡುವ‌ ಸಿಎಂ ಅಲ್ಲ. ಗಡಿ ವಿವಾದದ ಹೋರಾಟದಲ್ಲಿ ಏಕನಾಥ್ ಶಿಂಧೆ (Eknath Shinde) ಜೈಲಿಗೆ ಹೋಗಿದ್ದರು. ಹೀಗಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಗಡಿಯಲ್ಲಿ ಇರುವ ಮರಾಠಿ ಭಾಷಿಕರಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿದೆ. 865 ಹಳ್ಳಿಗಳಲ್ಲಿರುವ ಮರಾಠಿ ಭಾಷಿಕರಿಗೆ ಈ ಯೋಜನೆ ತಲುಪಿಸಬೇಕು. ಇದೇ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ಎಂಇಎಸ್‌ಗೆ ಪೂರ್ಣ ಅಧಿಕಾರ ನೀಡಿದೆ. ಎಂಇಎಸ್​ನ ಶಿಫಾರಸ್ಸು ಮೇರೆಗೆ ಆರೋಗ್ಯ ವಿಮೆ ಲಾಭ ಮರಾಠಿ ಭಾಷಿಕರಿಗೆ ಸಿಗಲಿದೆ. ಎಷ್ಟೇ ಕೋಟಿ ಖರ್ಚಾದರೂ ಪರವಾಗಿಲ್ಲ, ಮಹಾರಾಷ್ಟ್ರ ಸೇರಬಯಸುವ 865 ಹಳ್ಳಿಗಳ ಜನರ ಮನೆ ಮನೆಗೂ ಎಂಇಎಸ್ ಮುಖಂಡರು ಯೋಜನೆ ತಲುಪಿಸಬೇಕು ಎಂದು ಕರೆ ಕೊಟ್ಟರು.

ಈ ಆರೋಗ್ಯ ವಿಮೆ ಯೋಜನೆ ಗಡಿ ಹೋರಾಟಕ್ಕೆ ಬಲ ತಂದು ಕೊಡಲಿದೆ. ಈ ವಿಮೆ ಮೂಲಕ ಕರ್ನಾಟಕ, ಮಹಾರಾಷ್ಟ್ರದಲ್ಲಿ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಗಡಿ ಭಾಗದ ಮರಾಠಿ ಭಾಷಿಕರ ಪರವಾಗಿ ಮಹಾರಾಷ್ಟ್ರ ಸರ್ಕಾರವಿದೆ ಎಂದರು.

 

 


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ