Breaking News

ಹುಬ್ಬಳ್ಳಿ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು

Spread the love

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ, ಜನವರಿ 06: ಧಾರವಾಡ (Dharwad ) ಜಿಲ್ಲೆ ಕುಂದಗೋಳ ( Kundagol ) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿಅಪಘಾತ( Accident ) ಸಂಭವಿಸಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ಮಣಿಕಂಠ (26), ಪವನ(23), ಚಂದನ (31) ಮತ್ತು ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ