Breaking News

ಬಿಕೆ ಹರಿಪ್ರಸಾದ್ ರನ್ನು ಮಂಪರು ಪರೀಕ್ಷೆ ಒಳಪಡಿಸಬೇಕು: ಬಿವೈ ವಿಜಯೇಂದ್ರ

Spread the love

ಮೈಸೂರು: ಬಿ.ಕೆ.ಹರಿಪ್ರಸಾದ್ (BK Hariprasad) ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಕ್ಷಣ ಈ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

 

ಮೈಸೂರಿನ (Mysore) ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಈ ಸರ್ಕಾರ​ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ. ಅದರಲ್ಲು ಬಿ.ಕೆ. ಹರಿಪ್ರಸಾದ್ ಮಾನಸಿಕ ಸ್ಥೀಮಿತ ಕಳೆದುಕೊಂಡಂತೆ ಆಡುತ್ತಿದ್ದಾರೆ. ಅವರನ್ನು ಬಂಧಿಸಿ, ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ಡಿ.ಜೆ. ಹಳ್ಳಿ, (DJ Halli) ಕೆ.ಜೆ.ಹಳ್ಳಿ (KJ Halli) ಗಲಭೆ ಕೇಸ್​ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವಾಗುತ್ತಿದೆ. ಮತ್ತೊಂದೆಡೆ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ. ಹಿಂದೂ ಕಾರ್ಯಕರ್ತರನ್ನು ಅರೆಸ್ಟ್ ಮಾಡುವುದು. ಠಾಣೆಗೆ ಬೆಂಕಿ ಹಚ್ಚಿದವರನ್ನ ಅಮಾಯಕರು ಅನ್ನೋದು ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ. ಇದನ್ನ ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ