ಘಟನಾ ಸ್ಥಳಕ್ಕೆ ಮಾರ್ಕೆಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆ ಸೇರಿ 10 ಕಲಂ ಅಡಿ ದೂರು ನೀಡಲಾಗಿತ್ತು. ಸದ್ಯ ಪೊಲೀಸರು 7 ಜನ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು ಅವರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ.
ತಲೆಮರೆಸಿಕೊಂಡ ಆರೋಪಿಗಳ ವಶಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಮಾಜಿ ಸಚಿವ, ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಭೇಟಿ: ನೈತಿಕ ಪೊಲೀಸ್ ಗಿರಿಯಲ್ಲಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಸೋದರ-ಸೋದರಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ. ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಈ ಘಟನೆ ಬಗ್ಗೆ ತಕ್ಷಣ ಸಿಎಂ, ಗೃಹ ಸಚಿವರು ಗಮನ ಹರಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.