ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. ಬೆಳಗಾವಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ.
ಬಳಿಕ ಯುವತಿ ಮೊಬೈಲ್ ನಿಂದ ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ಆಗ ಕುಟುಂಬಸ್ಥರು ಅವರಿಬ್ಬರು ಸಹೋದರಿ, ಸಹೋದರರು ಅಂತ ಹೇಳಿದರೂ ನಂಬದೆ, ಮೊಬೈಲ್ ಸ್ವೀಚ್ ಆಫ್ ಮಾಡಿ ಮತ್ತೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಯುವಕ ಮತ್ತು ಯುವತಿ ತಾವು ಸಹೋದರಿ, ಸಹೋದರ ಅಂತಾ ಹೇಳಿದರೂ ದುಷ್ಕರ್ಮಿಗಳು ನಂಬಿಲ್ಲ. ಕೂಡಲೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮೊಬೈಲ್ ಲೋಕೇಶ್ ಆಧರಿಸಿ ಘಟನಾ ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ರಕ್ಷಿಸಿ ಪರಿಸ್ಥಿತಿ ತಿಳಿಗೊಳಿಸಿದರು. 16 ಜನರಲ್ಲಿ ಓರ್ವ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡ ಯುವತಿ ಮತ್ತು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.