ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.
ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಬಾಲಕಿ. ದೀಕ್ಷಾ ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈಕೆ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ಸೋಮವಾರ ಲ್ಯಾಬ್ ಪರೀಕ್ಷೆಯಿತ್ತು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆ ನಂತರವಷ್ಟೇ ತಿಳಿದುಬರಬೇಕಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.