ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣವನ್ನು ರಾಜ್ಯ ಸರ್ಕಾರ ದುರ್ಬಲಗೊಳಿಸುತ್ತಿದೆ: ಪ್ರಹ್ಲಾದ ಜೋಶಿ
Laxminews 24x7
ಜನವರಿ 8, 2024
ರಾಜಕೀಯ, ರಾಜ್ಯ
46 Views
ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ.
ಶಿಗ್ಗಾವ ತಾಲ್ಲೂಕಿನ ತಡಸ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಕಸಿತ ಭಾರತ ಮಾಡಲು ಹೊರಟರೆ ರಾಜ್ಯ ಕಾಂಗ್ರೆಸ್ ನವರು ತುಷ್ಟೀಕರಣ ರಾಜಕಾರಣ ಮೂಲಕ ಸಂಕುಚಿತ ಭಾರತ ಮಾಡಲು ಹೊರಟಿದ್ದಾರೆಂದು ವಾಗ್ದಾಳಿ ನಡೆಸಿದರು. ಡಿಜೆ ಹಳ್ಳಿ ಮತ್ತು ಕೆಜಿಹಳ್ಳಿ ಪ್ರಕರಣದ ಆರೋಪಿಗಳನ್ನು ಅಮಾಯಕರು ಎಂದು ಹೇಳಿಕೆ ನೀಡುತ್ತಾರೆ. ಇದನ್ನು ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲಿಬಾನ್ ರೀತಿ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಭಾರತೀಯರ ರಕ್ತ ಮತ್ತು ಪರಂಪರೆಯಲ್ಲಿ ಪ್ರಜಾಪ್ರಭುತ್ವವಿದೆ.
ಈ ರೀತಿ ಮಾಡಲು ಹೋದರೆ ಜನರು ನಿಮ್ಮನ್ನು ಎಲ್ಲಿಗೆ ಸೇರಿಸಬೇಕೋ ಅಲ್ಲಿಗೆ ಸೇರಿಸುತ್ತಾರೆ ಎಂದು ಕಿಡಿಕಾರಿದರು. ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಮೇಲೆ ಒಂದೂ ಕೇಸ್ ಇಲ್ಲ. ನೀವು ಕ್ಷಮೆ ಕೇಳುತ್ತೀರಾ?
16 ಕೇಸ್ ಎಂದು ಯಾರು ವರದಿ ನೀಡಿದ್ದಾರೋ ಅವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ? ಎಂದು ಸಿಎಂಗೆ ಪ್ರಶ್ನಿಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಅನ್ಯಾಯದ ವಿರುದ್ಧ ದನಿ ಎತ್ತಿದವರ ಮೇಲೆ ಕೇಸ್ ಹಾಕಿದ್ದಾರೆ. ಈ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ.