Breaking News

ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಜಗದೀಶ್ ಶೆಟ್ಟರ್

Spread the love

ಧಾರವಾಡ, ಜನವರಿ 08: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar)​ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್​​ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆ ಕಾರ್ಯಕರ್ತರನ್ನು ಸೇರಿಸಿ ಮಾರ್ಗದರ್ಶನ ಮಾಡುವ ಸಭೆ ಇದು. ಜ. 10ಕ್ಕೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಸಭೆ ನಡೆಸಲಿದ್ದಾರೆ.

 

ಲೋಕಸಭೆ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ಆಗುತ್ತದೆ ಎಂದು ಹೇಳಿದ್ದಾರೆ.

ಪಕ್ಷಕ್ಕೆ ಹೊಸಬರ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷಕ್ಕೆ ತತ್ವ ಸಿದ್ಧಾಂತ ಒಪ್ಪಿ ಯಾರೇ ಬಂದರು ತೆಗೆದುಕೊಳ್ಳಲು ಸಿದ್ಧವಿದ್ದೇವೆ ಎಂದಿದ್ದಾರೆ.

ನಾನಾಗಿಯೇ ಯಾರನ್ನು ಕರೆಯುತ್ತಿಲ್ಲ ಎಂದ ಶೆಟ್ಟರ್

ಮುನೇನಕೊಪ್ಪ ಕಾಂಗ್ರೆಸ್​ ಪಕ್ಷದ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಮುನೇಕೊಪ್ಪ ಜೊತೆಗೆ ನಾನು ಮಾತನಾಡಿಲ್ಲ. ನಾನಾಗಿಯೇ ಯಾರನ್ನು ಕರೆಯುತ್ತಿಲ್ಲ. ಸ್ವಯಂ ಪ್ರೇರಣೆಯಿಂದ ಅನೇಕರು ಪಕ್ಷಕ್ಕೆ ಬಂದಿದ್ದಾರೆ. ಸ್ವಪ್ರೇರಣೆಯಿಂದ ಅನೇಕರು ಕಾಂಗ್ರೆಸ್​ಗೆ ಬರುತ್ತಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ