Breaking News

ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ: ಸಿಎಂ

Spread the love

ಬೆಂಗಳೂರು: ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಲೇಖಕ ಡಾ.ಎಂ.ಎಸ್.ಮುತ್ತುರಾಜ್ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ.

ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಈ ಕಾರಣಕ್ಕೇ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಕರೆದಿದ್ದಾರೆ ಎಂದು ವಿವರಿಸಿದರು.

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲೀಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ ಎಂದರು.

ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು

 


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ