Breaking News

ಸೋನು ಸೂದ್ ಸೇವೆ ಮೆಚ್ಚಿ ರಾಜಭವನಕ್ಕೆ ರಾಜ್ಯಪಾಲರು ಆಹ್ವಾನ – ಶ್ಲಾಘನೆ

Spread the love

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರ ಸಾಮಾಜಿಕ ಕಾರ್ಯಗಳನ್ನು ಮೆಚ್ಚಿ ಮಹಾರಾಷ್ಟ್ರ ರಾಜ್ಯಪಾಲರು ರಾಜಭವನಕ್ಕೆ ಆಹ್ವಾನ ನೀಡಿ ಅಭಿನಂದನೆ ತಿಳಿಸಿದ್ದಾರೆ.

ನಟ ಸೋನು ಸೂದ್ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ನಂತರ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದರು. ಅವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಅಷ್ಟೇ ಅಲ್ಲದೇ ಸೋನು ಸೂದ್ ಅವರ ಉತ್ತಮ ಕಾರ್ಯವನ್ನು ಸರ್ಕಾರ ಕೂಡ ಮೆಚ್ಚಿದೆ. ಹೀಗಾಗಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ನಟ ಸೋನು ಸೂದ್‍ಗೆ ರಾಜಭವನಕ್ಕೆ ಆಹ್ವಾನ ನೀಡಿದ್ದರು. ಅದರಂತೆಯೇ ಸೋನು ಸೂದ್ ರಾಜ್ಯಪಾಲರನ್ನು ಭೇಟಿ ಮಾಡಿ, ತಾವು ಮಾಡುತ್ತಿರುವ, ಮಾಡಿರುವ ಕಾರ್ಯವನ್ನು ತಿಳಿಸಿದ್ದಾರೆ.

ಈ ಬಗ್ಗೆ ಸ್ವತಃ ರಾಜ್ಯಪಾಲರು ಟ್ವೀಟ್ ಮಾಡಿ ತಿಳಿಸಿದ್ದಾರೆ. “ನಟ ಸೋನು ಸೂದ್ ಅವರನ್ನು ಮುಂಬೈ ರಾಜಭವನದಲ್ಲಿ ಭೇಟಿಯಾಗಿದ್ದೆ. ಅವರು ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ನಿವಾಸಕ್ಕೆ ತಲುಪಲು ಮಾಡಿರುವ ಸಹಾಯ ಹಾಗೂ ಅವರಿಗೆ ಆಹಾರ ವ್ಯವಸ್ಥೆ ಮಾಡಿದ ಬಗ್ಗೆ ವಿವರಿಸಿದರು. ಅವರ ಮಹತ್ಕಾರ್ಯವನ್ನು ಶ್ಲಾಘಿಸಿದ್ದೇನೆ. ಅಲ್ಲದೇ ಅವರ ಸಾಮಾಜಿಕ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಚಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದರು.

ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಸುಮಾರು ಒಡಿಶಾದ 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯರ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

https://youtu.be/OYEMtBeW6b0


Spread the love

About Laxminews 24x7

Check Also

ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ: ಪ್ರಲ್ಹಾದ್​ ಜೋಶಿ

Spread the loveಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್​ ಜೋಶಿ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ