ಬೆಂಗಳೂರು: ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಕೆಲವು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹಲವು ಕ್ಷೇತ್ರಗಳಲ್ಲಿ “ಗೆಲ್ಲಬಲ್ಲ” ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತದೆ,
ಹೀಗಾಗಿ ಕೆಹೆಚ್ ಮುನಿಯಪ್ಪ (ಏಳು ಬಾರಿ ಕೋಲಾರ ಸಂಸದ), ಕೆಎನ್ ರಾಜಣ್ಣ ಮತ್ತು ಬಿ ನಾಗೇಂದ್ರ ಅವರಂತಹ ಸಚಿವರನ್ನು ಕಣಕ್ಕಿಳಿಸಲು ಪಕ್ಷ ಮುಂದಾಗಬಹುದು ಎಂದು ತಿಳಿದು ಬಂದಿದೆ. ಅಂತಹ ಪರಿಸ್ಥಿತಿ ಎದುರಾದರೆ, ಸಚಿವರು ಸ್ಪರ್ಧಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.