Breaking News

ರೆಸಾರ್ಟ್​ ರಾಜಕೀಯ ಗುಟ್ಟು ಬಿಚ್ಚಿಟ್ಟ ಜೆಡಿಎಸ್ ನಾಯಕ

Spread the love

ಚಿಕ್ಕಮಗಳೂರು, (ಜನವರಿ 10): ಲೋಕಸಭೆ ಚುನಾವಣೆ (Loksabha Election 2024) ಹತ್ತಿರವಾಗುತ್ತಿದ್ದಂತೆಯೇ ಗೆಲುವಿನ ಸೂತ್ರ ಹೆಣೆಯಲು ದಳ ಕೋಟೆಯಲ್ಲಿ ರೆಸಾರ್ಟ್ ರಾಜಕಾರಣ (resort Politics) ಶುರುವಾಗಿದೆ. ಚಿಕ್ಕಮಗಳೂರು(Chikkamagaluru) ತಾಲೂಕಿನ ಮಲ್ಲೇನಹಳ್ಳಿ ಸಮೀಪದ ರೆಸಾರ್ಟ್‌ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) 10 ರೂಂ ಬುಕ್‌ ಮಾಡಿ ಪಕ್ಷದ​ ನಾಯಕರ ಜೊತೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ.

 

ಅಷ್ಟಕ್ಕೂ ರೆಸಾರ್ಟ್ ರಾಜಕಾರಣ ಹಿಂದಿನ ಕಾರಣ ಕೆದಕುತ್ತಾ ಹೊರಟರೇ ಬೇರೆಯದ್ದೇ ಕಹಾನಿ ತೆರೆದುಕೊಳ್ಳುತ್ತೆ. ಅದುವೇ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ. ಹೌದು..ಕುಮಾರಸ್ವಾಮಿಯ ರೆಸಾರ್ಟ್ ರಾಜಕೀಯದ ಬಗ್ಗೆ ಜೆಡಿಎಸ್​ ನಾಯಕ ಭೋಜೇಗೌಡ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

 

ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್​ ನಾಯಕ ಭೋಜೇಗೌಡ, ಮಂಡ್ಯ, ಹಾಸನ ಜೆಡಿಎಸ್ ನ ಭದ್ರಕೋಟೆ. ನಾವು ಮಂಡ್ಯದಲ್ಲಿ ಸೋತಿರಬಹುದು. ಆದ್ರೆ, ಪುಟ್ಟರಾಜುಗಿಂತ ನಿಖಿಲ್ ಕುಮಾರಸ್ವಾಮಿ 60 ಸಾವಿರ ಜಾಸ್ತಿ ಮತ ಪಡೆದಿದ್ದರು. ನಮ್ಮ ಬೇಸ್ ಇಲ್ಲದೆ ಅಷ್ಟು ಮತಗಳು ಬಂದಿದೆ. ಇನ್ನು ಈ ಬಾರಿ ಮಂಡ್ಯದಲ್ಲಿ ಕುಮಾರಸ್ವಾಮಿ ನಿಲ್ಲಬೇಕು ಎಂದು ಸೋತ ಶಾಸಕರು, ನಮ್ಮ ಕಾರ್ಯಕರ್ತರು ಒತ್ತಡ ತರುತ್ತಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ