Breaking News

ಹೆಚ್ಚುವರಿ ಡಿಸಿಎಂ ಹುದ್ದೆ ಕೇಳುವವರನ್ನು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸಲು ಡಿಕೆಶಿ ಸಲಹೆ

Spread the love

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಮಾಡಬೇಕು ಎಂದು ಒತ್ತಡ ಹೇರುತ್ತಿರುವವರಿಗೆ ಲೋಕಸಭಾ (lokasabha) ಚುನಾವಣೆ (election) ಜವಾಬ್ದಾರಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (d.k. shivakumar) ಅವರು ಕಾಂಗ್ರೆಸ್ (congress) ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ.

 

ದಲಿತ ಮತ್ತು ಸಿಎಂ ಆಪ್ತ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಣಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಆದರೆ, ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (mallikarjun kharge), ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ (Randeep Singh Surjewala) ಅವರು ಇಂಥ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಈ ರೀತಿಯ ಹೇಳಿಕೆ ಕೊಡುವವರಿಗೆ ಚುನಾವಣೆ ಜವಾಬ್ದಾರಿ ನೀಡುವಂತೆ ಸಲಹೆ ನೀಡಿದ್ದು, ಅವರನ್ನೇ ಚುನಾವಣೆಯಲ್ಲಿ ಕಣಕ್ಕೆ ಇಳಿಸಿ ಪ್ರಬಲ ಅಭ್ಯರ್ಥಿ ಕೊರತೆಯನ್ನು ನೀಗಿಸಿ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ