Breaking News

ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ: ವಿಜಯೇಂದ್ರ

Spread the love

ರಾಯಚೂರು: ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ. ಮುಂದೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಅನುಷ್ಠಾನಕ್ಕೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಅಲೆಯಿದೆ.

ಹೀಗಾಗಿ ಕಾಂಗ್ರೆಸ್ ನಾಯಕರು ಆತಂಕದಲ್ಲಿದ್ದಾರೆ. ರಾಮಮಂದಿರ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡವಳಿಕೆಯನ್ನು ಮತದಾರರು ಗಮನಿಸುತ್ತಿದ್ದಾರೆ ಎಂದರು.

ಒಂದೆಡೆ ಮೂವರನ್ನು ಉಪ ಮುಖ್ಯಮಂತ್ರಿ ಮಾಡಬೇಕು ಅಂತ ಅವರ ಪಕ್ಷದ ನಾಯಕರೇ ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ಈ ಸರ್ಕಾರ ಬಂದಮೇಲೆ ಒಂದು ಅಭಿವೃದ್ಧಿ ಕೆಲಸವೂ ಆಗಿಲ್ಲ ಎಂದು ಜನರು ಶಾಪ ಹಾಕುತ್ತಿದ್ದಾರೆ. ಆದರೆ, ಬರಗಾಲದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಗಾಲದಲ್ಲಿ ತ್ರಿಪೇಸ್ ವಿದ್ಯುತ್ ಕೊಡಲು ಸರ್ಕಾರಕ್ಕೆ ಆಗಿಲ್ಲ. ಇದು ಜನ ವಿರೋಧಿ, ಬಡವರ ವಿರೋಧಿ, ರೈತ ವಿರೋಧಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ