ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ದಿನವಾದ ಜನವರಿ 22 ರಂದು ಕರ್ನಾಟಕದ ರಾಮಮಂದಿರಗಳಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮನ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಅದನ್ನು ನಾವು ವಿರೋಧಿಸುತ್ತೇವೆ. ನಾವು ಕೂಡ ಶ್ರೀರಾಮನ ಭಕ್ತರೇ ಎಂದು ಹೇಳಿದರು.
ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ನನಗೆ ಸಿಕ್ಕಿಲ್ಲ. ನಾವೂ ಕೂಡ ರಾಮನನ್ನು ಪೂಜಿಸುತ್ತೇವೆ. ಆದರೆ, ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ಮಾತ್ರ ರಾಜಕೀಯ ಮಾಡುತ್ತಿದೆ. ಜನವರಿ 22ರ ಬಳಿಕ ನಾನೂ ಅಯೋಧ್ಯೆಗೆ ಹೋಗಿ ಶ್ರೀರಾಮನ ದರ್ಶನ ಪಡೆಯುತ್ತೇನೆ ಎಂದು ತಿಳಿಸಿದರು.