ಬೆಂಗಳೂರು: ಹಾವೇರಿಯಲ್ಲಿ (haveri) ನಡೆದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ (home minister) ಡಾ. ಜಿ. ಪರಮೇಶ್ವರ್ (dr. g. parameshwar) ಹೇಳಿದರು.
ಬೆಂಗಳೂರಿನಲ್ಲಿ (bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಮೇಲೆ ಗ್ಯಾಂಗ್ ರೇಪ್ ಆಗಿದೆ ಎನ್ನುವ ಕುರಿತು ಮೊದಲು ದೂರು ಕೊಟ್ಟಿರಲಿಲ್ಲ.
ಬಳಿಕ ಆಕೆ ರೇಪ್ ಆಗಿದೆ ಎಂದು ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಹಾವೇರಿ ಕೇಸ್ ತನಿಖೆ ನಡೆಯುತ್ತಿದೆ. ಇದು ಪೂರ್ಣಗೊಂಡ ಬಳಿಕ ಸತ್ಯ ಏನೆಂಬುದು ಗೊತ್ತಾಗಲಿದೆ. ಬಳಿಕ ತಪ್ಪಿತಸ್ಥರ ವಿರುದ್ಧ ಖಂಡಿತಾ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Laxmi News 24×7