Breaking News

ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ’ಕ್ಕೆ ಪ್ರಧಾನಿ ಮೋದಿ ಕರೆ

Spread the love

ನಾಸಿಕ್(ಮಹಾರಾಷ್ಟ್ರ) : ರಾಮಲಲ್ಲಾ(Ram Mandir) ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರದ ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ ‘(Cleanliness drive) ಕೈಗೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

 

 

ರಾಮ ಮಂದಿರ ಉದ್ಘಾಟನೆಗೆ 10 ದಿನ ಬಾಕಿ ಇರುವಾಗಲೇ ನಾಸೀಕ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ 27ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಯುವ ಶಕ್ತಿ ಯೋಗ ಮತ್ತು ಆಯುರ್ವೇದದ ಪ್ರಚಾರಕರಾಗುತ್ತದೆ, ಯುವಜನರಿಂದ ಭಾರತಕ್ಕೆ ಹೊಸ ಶಕ್ತಿ ಬಂದಿದೆ ಎಂದು ಮೋದಿ ಹೇಳಿದ್ದಾರೆ.

 

ಕಾರ್ಯಕ್ರಮದ ಬಳಿಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಅವರು ನಾಸಿಕ್‌ನಲ್ಲಿ ಬೃಹತ್‌ ರೋಡ್‌ ಶೋ ಕೂಡ ನಡೆಸಿದ್ದಾರೆ. ಬಳಿಕ ಇಲ್ಲಿನ ಕಾಲಾರಾಮ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸ್ವಚ್ಛತಾ ಅಭಿಯಾನಕ್ಕೆ ಕರೆ

ಕಾಲಾರಮ ದೇವಾಲಯದಲ್ಲಿ ವಿಶೇಷ ಪೂಜೆಗೂ ಮುನ್ನ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಖುದ್ದು ನಡೆಸಿದ ಪ್ರಧಾನಿ ಮೋದಿ ಜ.22ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಲುವಂತೆ ದೇಶದ ಜನತೆಗೆ ಕರೆ ನೀಡಿದ್ದಾರೆ . ಜೊತೆಗೆ ಇಲ್ಲಿನ ರಾಮಕುಂಡಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ