ಬೆಂಗಳೂರು: ಬೆಂಗಳೂರಲ್ಲಿ ಆಸ್ತಿ ತೆರಿಗೆ (Property Tax) ಪಾವತಿ ಕುರಿತ ನೋಟಿಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದೆ. 30×40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ (Tax Exemption) ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.
ಶಿವಕುಮಾರ್ (DK Shivakumar) ತಿಳಿಸಿದರು.
ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಮಂಗಳವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಆಸ್ತಿ ತೆರಿಗೆ ವಿಚಾರದಲ್ಲಿ ಸಮಸ್ಯೆ ಆಗಿದೆ ಎಂಬ ಅನೇಕ ದೂರುಗಳು ಬಂದಿವೆ. ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟಿಸ್ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. ಈ ಕಾರ್ಯಕ್ರಮ ನಡೆದ ಎಲ್ಲ ಕ್ಷೇತ್ರಗಳಲ್ಲೂ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
Laxmi News 24×7