ಗೋಕಾಕ : 10 ವರ್ಷ ಜೈಲು ಶಿಕ್ಷೆಯೊಂದಿಗೆ ₹7 ಲಕ್ಷ ದಂಡ ವಿಧಿಸುವ ಹೊಸ ಹಿಟ್ ಅಂಡ್ ರನ್ ಕಾನೂನಿನ ವಿರುದ್ಧ ಕರ್ನಾಟಕ ಟ್ರಕ್ ಚಾಲಕರು ಇಂದು ಮುಷ್ಕರ ನಡೆಸಿದರು.
ನಗರದ ತಹಶೀಲ್ದಾರ್ ಕಚೇರಿ ಹತ್ತಿರ ಲಕ್ಷ್ಮೀ ಲಾರಿ ಮಾಲೀಕರ ಹಾಗೂ ಚಾಲಕರ ಅಸೋಸಿಯೇಷನ್ ಗೋಕಾಕ ವತಿಯಿಂದ ಮುಷ್ಕರ ಆರಂಭವಾಗಿದೆ.
ಕೇಂದ್ರ ಸರ್ಕಾರ ಜಾರಿ ತರಲು ನಿರ್ಧರಿಸಿರುವ ನೂತನ ಹಿಂಟ್ ಅಂಡ್ ರನ್ ಕಾನೂನು ವಿರೋಧಿಸಿ ಮಧ್ಯರಾತ್ರಿಯಿಂದ ಕರೆ ನೀಡಲಾಗಿರುವ ಮುಷ್ಕರಕ್ಕೆ ಟ್ರಕ್ ಗೋಕಾಕ ಚಾಲಕರಿಂದ ಬೆಂಬಲ ವ್ಯಕ್ತವಾಗಿದೆ.
ಈ ಪರಿಸ್ಥಿತಿಯಲ್ಲಿ, ಕೇಂದ್ರ ಸರ್ಕಾರವು ಹಿಟ್ ಅಂಡ್ ರನ್ ಪ್ರಕರಣಗಳಿಗೆ ಕಠಿಣ ದಂಡವನ್ನು ತಂದಿದೆ, ಅಲ್ಲಿ ಚಾಲಕನಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ. ಅಂತಹ ನಿಬಂಧನೆಗಳನ್ನು ಹಿಂಪಡೆಯುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ತಾವು ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪತ್ರಗಳನ್ನು ಕಳುಹಿಸಿದ್ದೇನೆ ಎಂದು ಹೇಳಿದರು.
Laxmi News 24×7