Breaking News

ಸದಾಶಿವ ಆಯೋಗ ಜಾರಿಗೆ ಮುಂದಾದ ರಾಜ್ಯ ಸರ್ಕಾರ!

Spread the love

ಬೆಂಗಳೂರು : ಎಸ್‌ಸಿ ಸಮುದಾಯದ(SC community) ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ(Internal reservation) ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ವರದಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ವರದಿ ಜಾರಿಗೆ ಮುಂದಾಗಿದ್ದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ. ಕಾನೂನಾತ್ಮಕವಾಗಿ ಒಳಮೀಸಲಾತಿ ಕೊಡಬೇಕಾದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಸಂವಿಧಾನದಲ್ಲಿ ತಿದ್ದುಪಡಿ ತರಲು ಸಾಧ್ಯವಿಲ್ಲ ಹೀಗಾಗಿ ಮೀಸಲಾತಿ ಪರಿಷ್ಕರಣೆಗೆ ರಾಜ್ಯಗಳಿಗೆ ಅಧಿಕಾರ ನೀಡಲು ಮನವಿ ಮಾಡಲು ನಿರ್ಧರಿಸಲಾಗಿದೆ, ಹಾಗೇ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಲೋಕಸಭೆ ಚುನಾವಣೆ ಹತ್ತಿರವಿರುವ ಈ ಸಂದರ್ಭದಲ್ಲಿ ನ್ಯಾ.ಸದಾಶಿವ ಆಯೋಗ ಜಾರಿ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲವಾಗಲಿದೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ