Breaking News

ಸಿದ್ದರಾಮಯ್ಯಗೆ ಉತ್ತರ ಕೊಡಲು ಬಿಜೆಪಿ ಐಟಿ ಸೆಲ್‌ ಹುಡುಗ್ರು ಸಾಕು ಎಂದ ಬೊಮ್ಮಾಯಿ!

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೋದಿ ಫೋಬಿಯಾ (Modi Phobia) ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ.

ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ಧ ಅನಗತ್ಯ ಆರೋಪ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಹೇಳಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೇಂದ್ರದ ಅನುದಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತಿರುಗೇಟನ್ನೂ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಜೊತೆ ಚರ್ಚೆ ಮಾಡಲು ಆಗಲ್ಲ ಅನ್ನುವುದು ಗೊತ್ತಿದೆ. ಅವರು ಮೊದಲು ನಮ್ಮ ಐಟಿ ಸೆಲ್ ಹುಡುಗರ ಜೊತೆ ಚರ್ಚೆ ಮಾಡಲಿ. ನಮ್ಮ ಐಟಿ ಸೆಲ್ ಹುಡುಗರು ಎಲ್ಲ ಮಾಹಿತಿ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.

15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಅನುದಾನ ಶೇ 4.7 ನಿಂದ ಶೇ 3.6ಗೆ ಇಳಿಯಲು ಸಿದ್ದರಾಮಯ್ಯ ಅವರೇ ಕಾರಣ. ಅವರು ಸರಿಯಾಗಿ ರಾಜ್ಯದ ವಸ್ತು ಸ್ಥಿತಿ ಬಗ್ಗೆ ಮಾಹಿತಿ ನೀಡಿಲ್ಲ. ನಮ್ಮ ಅವಧಿಯಲ್ಲಿಯೂ ಪ್ರವಾಹ ಬಂದಾಗ ಹಿಂದಿನ ಯುಪಿಎ ಸರ್ಕಾರ ಪರಿಹಾರ ನೀಡಿತ್ತಾ ? ನಾವು ಕೇಂದ್ರದ ಅನುದಾನಕ್ಕಾಗಿ ಕಾಯದೇ 2500 ಕೋಟಿ ರೂ. ಪರಿಹಾರ ನೀಡಿದ್ದೆವು ಎಂದು ವಿವರಿಸಿದರು.


Spread the love

About Laxminews 24x7

Check Also

ಹುಕ್ಕೇರಿ : ಹುಕ್ಕೇರಿ ಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ ಪಥ ಸಂಚಲನ.

Spread the loveಹುಕ್ಕೇರಿ : ಹುಕ್ಕೇರಿ ಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ ಪಥ ಸಂಚಲನ. ಹುಕ್ಕೇರಿ ನಗರದಲ್ಲಿ ಭದ್ರಾವತಿಯ ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ