Breaking News

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ

Spread the love

ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ: ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ.
ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಖಾನಾಪುರ ಪಟ್ಟಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಮ ಮಂದಿರ ಉದ್ಘಾಟನೆ ಅಕ್ಷತೆ ಮನೆ ಮನೆಗೆ ಹೋಗಿದೆ. ಐನೂರು ವರ್ಷದ ನಂತರ ನಮಗೆ ಜಯ ಸಿಕ್ಕಿದೆ. ರಾಮ ಮಂದಿರವನ್ನು ಯಾರೋ ಉದ್ಯಮಿ, ಕೈಗಾರಿಕೋದ್ಯಮಿಗಳು ಕಟ್ಟಿಲ್ಲ. ಹಳ್ಳಿ ಹಳ್ಳಿಯಿಂದ ಇಟ್ಟಿಗೆ ಕಳಿಸಿದ್ದೇವೆ, ಇಡೀ ದೇಶದ ಜನ ಜಾಗೃತರಾಗಿ ಕಟ್ಟಿದ್ದು.

ಅಯೋಧ್ಯೆ ಹಿಂದೂಗಳ ಪ್ರತೀಕ, ಸೌರಾಷ್ಟ್ರದ ಸೋಮನಾಥ ದೇವಾಲಯ ಸರ್ಕಾರ ಕಟ್ಟಿದ್ದು. ರಾಮ ಮಂದಿರ ಸರ್ಕಾರ ಕಟ್ಟಿಲ್ಲ, ಹಿಂದೂಗಳು ಕಟ್ಟಿದ್ದಾರೆ. ಅಪಮಾನವನ್ನು ತೊಳೆದು ರಾಮ ಮಂದಿರ ಕಟ್ಟಲಾಗಿದೆ. ನಾವು ಹಿಂದೂಗಳು ಎಂದು ಮರೆತು ಹೋಗಿತ್ತು.

ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದ್ರೆ ಅವರ ಜಾತಿ ಹೆಸರು ಹೇಳ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ದರೆ ಹಿಂದೂ ಅಂತಾ ಹೇಳ್ತಾರೆ. ಕೆಲವು ಮಂದಿ ಜಾತ್ಯತೀತ ಅಂತಾ ಹೇಳ್ತಾರೆ.

ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯಾತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ