Breaking News

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ

Spread the love

ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಮಂಜೂರು ಮಾಡಲು ಉದ್ದೇಶಿಸಿರುವ ಜಮೀನು ಸಂತ್ರಸ್ತರ ಗ್ರಾಮದಿಂದ ದೂರದಲ್ಲಿರುವುದರಿಂದ ಪರ್ಯಾಯ ಜಮೀನು ಮಂಜೂರು ಮಾಡುವಂತೆ ಸಂತ್ರಸ್ತರು ಮಾಡಿರುವ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸಂತ್ರಸ್ತರಿಗೆ ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯ ಸರ್ಕಾರ ನೀಡಿದ ಎಲ್ಲಾ ಅಂಶಗಳನ್ನು ದಾಖಲಿಸಿಕೊಂಡ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ, ಘಟನೆ ಬೆಳಕಿಗೆ ಬಂದ ನಂತರ ಸ್ವಯಂ ಪ್ರೇರಿತವಾಗಿ ಆರಂಭಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ