Breaking News

“ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌ ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು”

Spread the love

ಬೆಂಗಳೂರು: ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌ ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

 

ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು.ವೇಮನರಾದಿಯಾಗಿ ಬಸವಾದಿ ಶರಣರು ಮನುಕುಲದ ಆಸ್ತಿ. ಪ್ರತೀ ಮಗುವೂ ಹುಟ್ಟುತ್ತಾ ವಿಶ್ವ ಮಾನವ. ಬೆಳೆಯುತ್ತಾ ಅಲ್ಪಮಾನವರಾಗಿ ಬಿಡುತ್ತಾರೆ ಎಂದು ಕುವೆಂಪು ಹೇಳಿರುವ ಮಾತು ಸತ್ಯ.

ವೇಮನ ಅವರು ಆಕಸ್ಮಿಕವಾಗಿ ರೆಡ್ಡಿ ಸಮುದಾಯದಲ್ಲಿ ಹುಟ್ಟಿದ್ದರೂ ಅವರು ಇಡಿ ಮನುಕುಲಕ್ಕೆ ಬೇಕಾದವರಾಗಿದ್ದರು.ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌

ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು.ರೆಡ್ಡಿ ಜನ ಸಂಘದ ಶಿಕ್ಷಣ ಸಂಸ್ಥೆಗೆ ಜಮೀನು ಒದಗಿಸಲು ಸರ್ಕಾರ ಸಿದ್ಧವಿದೆ. ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪುತ್ಥಳಿಯನ್ನು ವಿಧಾನಸೌಧದಲ್ಲಿ ಹಾಕಲು ಅವಕಾಶ ಕಲ್ಪಿಸಿದ್ದು ನಮ್ಮ ಅವಧಿಯಲ್ಲೇ ಎಂದು ತಿಳಿಸಿದರು.


Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ