Breaking News

ಸೋತರೆ ಸಚಿವರ ತಲೆ ದಂಡ ಎನ್ನುವುದು ಸುಳ್ಳು: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ”ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡವಾಗುತ್ತದೆ ಎನ್ನುವುದು ಸುಳ್ಳು” ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

 

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಸಲಾಗಿದೆ.

 

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ 6 ಆಕಾಂಕ್ಷಿಗಳ ಅರ್ಜಿ ಸಲ್ಲಿಕೆಯಾಗಿವೆ ಎಂದರು.

 

ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ ಯಾವುದೇ ಮಾನದಂಡ ಇಲ್ಲ. ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಹೀಗಿರುವಾಗ ಸಚಿವರ ತಲೆದಂಡ ಎಂಬುದು ಸುಳ್ಳು.

ಅಂತಹ ವಿಚಾರ ಪಕ್ಷದ ಹೈಕಮಾಂಡ್ ಮುಂದಿಲ್ಲ ಎಂದರು.ಈಗಾಗಲೇ ಕಳೆದ ಆರು ತಿಂಗಳಿನಿಂದ ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ ಆಂತರಿಕ ಸಮೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

101 ಕೆ.ಜಿ ತೂಕದ ಚೀಲ ಹೊತ್ತು ಅಂಜನಾದ್ರಿ ಬೆಟ್ಟವೇರಿದ ಯುವಕ

Spread the love ಗಂಗಾವತಿ(ಕೊಪ್ಪಳ): ದೇವರ ಮೇಲಿನ ನಂಬಿಕೆ ಮತ್ತು ವಿಶ್ವಾಸ ಎಂತಹ ಛಲದ ಸಾಧನೆಗೂ ಪ್ರೇರಣೆ ನೀಡುತ್ತದೆ ಎನ್ನುವುದಕ್ಕೆ ಯುವಕಯೊಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ