Breaking News

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಬೆಳಗಾವಿಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿ ವಜಾ

Spread the love

ಬೆಳಗಾವಿ, : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾನೆಹಿನ್ನೆಲೆ ಜಿಲ್ಲೆಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ನ ಧಾರವಾಡ ವಿಭಾಗೀಯ ಪೀಠ​ ವಜಾಗೊಳಿಸಿ ಆದೇಶ ಹೊರಡಿಸಿದೆ. ಶ್ರೀರಾಮ ಸೇನೆ ಹಿಂದೂಸ್ತಾನ್ ವತಿಯಿಂದ ನಾಳೆ ಮಧ್ಯಾಹ್ನ ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟ‌ನೆ ಸಂಸ್ಥಾಪಕ ರಮಾಕಾಂತ ಕೊಂಡುಸ್ಕರ ನೇತೃತ್ವದಲ್ಲಿ ನಗರದ ಸಂಭಾಜಿ ವೃತ್ತದಿಂದ ಶಹಾಪೂರ ವರೆಗೂ ಶೋಭಾಯಾತ್ರೆ ನಡೆಸಲು ಮುಂದಾಗಿದ್ದರು. ಆದರೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಯಾತ್ರೆಗೆ ಪೊಲೀಸ್​ ಅನುಮತಿ ನೀಡಲು ನಿರಾಕರಿಸಿದ್ದಾರೆ.

 

ಇದನ್ನ ಪ್ರಶ್ನಿಸಿ ಹೈಕೋರ್ಟ್​ನ ಧಾರವಾಡ ವಿಭಾಗೀಯ ಪೀಠ​ಕ್ಕೆ ಅಧ್ಯಕ್ಷ ರಮಾಕಾಂತ ಕೊಂಡುಸ್ಕರ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜನವರಿ 22 ರಂದು ಶೋಭಾಯಾತ್ರೆಗೆ ಅನುಮತಿ ಕೋರಿಕೆಯನ್ನ ವಜಾಗೊಳಿಸಿದೆ.

ಲಕ್ಷ‌ ದೀಪೋತ್ಸವಕ್ಕೆ ನೀಡಿದ್ದ ಅನುಮತಿ ಕೊನೆ ಕ್ಷಣದಲ್ಲಿ ರದ್ದು

 

ಮೈಸೂರು ಅಶೋಕ ರಸ್ತೆಯಲ್ಲಿ ಲಕ್ಷ ದೀಪೋತ್ಸವಕ್ಕೆ ನೀಡಿದ್ದ ಅನುಮತಿಯನ್ನು ಕೊನೆ ಕ್ಷಣದಲ್ಲಿ ರದ್ದು ಮಾಡಲಾಗಿದೆ. ಲಕ್ಷ ದಿಪೋತ್ಸವಕ್ಕೆ ಪೊಲೀಸ್ ಅನುಮತಿ ರದ್ದುಪಡಿಸಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸರಿಂದ ಅನುಮತಿ ಸಹಾ ಪಡೆಯಲಾಗಿತ್ತು. ಇದೀಗ ಹೆಚ್ಚು ವಾಹನ ಸಂಚಾರ ಜನ ಸಂದಣಿ ಕಾರಣ ನೀಡಿ ಅನುಮತಿ ರದ್ದು ಮಾಡಲಾಗಿದೆ.

 

ತೆರಕಣಾಂಬಿ ಗ್ರಾಮದಲ್ಲಿ ಮಾಂಸ ಮಾರಾಟ ನಿಷೇಧ

 

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮಾಂಸದ ಅಂಗಡಿ ಮತ್ತು ನಾನ್ ವೆಜ್ ಹೋಟೆಲ್​​ಗಳಲ್ಲಿ​​ ಮಾರಾಟ ನಿಷೇಧ ಮಾಡಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಅಯೋಧ್ಯೆ ರಾಮಲಲ್ಲಾ ಪ್ರಾಣಪ್ರತಿಷ್ಠಾನೆ ಪ್ರಯುಕ್ತ ಜನವರಿ 20 ರಿಂದ 22 ರವರೆಗೆ ಮಾಂಸ ಮಾರಾಟವನ್ನು ನಿಷೇಧಗೊಳಿಸಲಾಗಿದೆ.

 

ಮೂರು ದಿನಗಳವರೆಗೆ ಮಾರಾಟ ಸ್ಥಗಿತಗೊಳಿಸಬೇಕು ಎಂದು ನಾನ್ವೆಜ್ ಹೋಟೆಲ್ ಸೇರಿದಂತೆ ಅಂಗಡಿಗಳಿಗೂ ಸಹ ನೋಟಿಸ್​ ನೀಡಲಾಗಿದೆ. ಮಾಂಸ ಮಾರಾಟ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ