Breaking News

ವಿವಾದ ಸೃಷ್ಟಿಸಿದ್ದ ಹುಬ್ಬಳ್ಳಿ MTS ಕಾಲೋನಿಯ 13 ಎಕರೆ ಜಮೀನು ಲೀಸ್ ಟೆಂಡರ್ ರದ್ದು: RLDA ಬೋರ್ಡ್​ ಆದೇಶ

Spread the love

ಹುಬ್ಬಳ್ಳಿ, ಜ.21: ಸಾಕಷ್ಟು ವಿವಾದ ಸೃಷ್ಟಿಸಿದ್ದಹುಬ್ಬಳ್ಳಿಯ (Hubballi)ಎಂಟಿಎಸ್ ಕಾಲೋನಿಯ 13 ಎಕರೆ ಜಮೀನಿನ ಟೆಂಡರ್ ಪ್ರಕ್ರಿಯೆಯನ್ನು ರೈಲ್ವೆ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ (RLDA) ಬೋರ್ಡ್ ರದ್ದುಗೊಳಿಸಿ ಆದೇಶಿಸಿದೆ.

ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ MTS ಕಾಲೀನಿಯ 13 ಎಕರೇ ಜಮೀನನ್ನು 99 ವರ್ಷಗಳಿಗೆ ಲೀಸ್​ಗೆ ನೀಡಲು ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆ ರೈಲ್ವೇ ಭೂಮಿ ಅಭಿವೃದ್ಧಿ ಪ್ರಾಧಿಕಾರವು 13 ಎಕರೇ ಜಮೀನು ಲೀಸ್​ಗೆ ಇದೆ ಎಂದು ಬೋರ್ಡ್ ಹಾಕಿತ್ತು. ಈ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೆಸರು ತಳಕು ಹಾಕಿತ್ತು.

 

ಜೋಶಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದರು. 1300 ಕೋಟಿ ಬ್ರಷ್ಟಾಚಾರದಲ್ಲಿ ಜೋಶಿ ಭಾಗಿಯಾಗಿದ್ದಾರೆ. ಸರ್ಕಾರಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ, ಸ್ಥಳೀಯ ಮಟ್ಟದಲ್ಲಿ ಕೈ ನಾಯಕರು ಹೋರಾಟ ಮಾಡಿದ್ದರು.

ಇದೀಗ ರೇಲ್ವೆ ಅಥಾರಿಟಿ ಡೆವೆಲಪ್ಮೆಂಟ್ ಬೋರ್ಡ್, ಜಮೀನನ್ನು ಲೀಸ್​ಗೆ ನೀಡುವ ಟೆಂಡರ್ ಪ್ರಕ್ರಿಯೆಯನ್ನೇ ರದ್ದು ಮಾಡಿದೆ. ಈ ಹಿಂದೆ ಐದು ಸಲ ಟೆಂಡರ್ ಕರೆದಾಗಲು ಯಾರೂ ಆಸಕ್ತಿ ತೋರಿಸಿರಲಿಲ್ಲ. ಹೀಗಾಗಿ ಆಡಳಿತ್ಮಾಕ ಆಧಾರದ ಮೇಲೆ ಇದೀಗ ಟೆಂಡರ್ ರದ್ದುಗೊಳಿಸಿ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.


Spread the love

About Laxminews 24x7

Check Also

ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು

Spread the loveಬೆಳಗಾವಿಯ ಜಿಲ್ಲೆಯಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಸಂಬಂಧ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ