Breaking News

ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?

Spread the love

ತುಮಕೂರು,: ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿಕೊಬ್ಬರಿಗೆ (Copra/Coconut)ಬೆಂಬಲ ಬೆಲೆಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.

ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ ಮಾಡಲು ಸಲಹೆ ನೀಡಿದ್ದೇನೆ ಎಂದರು.

 

ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು. ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಬೆಂಬಲ ಘೋಷಣೆ ಮಾಡಿತ್ತು. ಇದರ ಕ್ರೆಡಿಟ್​ ನಮ್ಮದೇ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದರು.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ