Breaking News

ಯುವನಿಧಿʼ ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ ನಿರುದ್ಯೋಗ ಭತ್ಯೆ ಪಡೆಯಿರಿ

Spread the love

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.

2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ https://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ.


Spread the love

About Laxminews 24x7

Check Also

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

Spread the loveಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ