ಗುವಾಹಟಿ: ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಸಂಸದ ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ದೂರು ದಾಖಲಿಸಿದ್ದಾರೆ. ಈ ವಿಚಾರವನ್ನು ಸ್ವತಃ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ.
ಪೊಲೀಸ್ ಬಲವನ್ನು ಬಳಸಿಕೊಂಡು ಭಾರತ್ ಜೋಡೋ ಯಾತ್ರೆಯನ್ನು ಹತ್ತಿಕ್ಕುವ ಕೆಲಸವನ್ನು ಅಸ್ಸಾಂ ಸರ್ಕಾರ ಮಾಡುತ್ತಿದೆ ಎಂಬುದು ಕಾಂಗ್ರೆಸ್ ಆರೋಪ. ಆದರೆ, ಕಾಂಗ್ರೆಸ್ ವಿನಾಕಾರಣ ಗೊಂದಲ ಸೃಷ್ಟಿ ಮಾಡಿ, ಹಿಂಸಾಚಾರ ಸೃಷ್ಟಿಸುತ್ತಿದೆ ಎಂಬುದು ಆಡಳಿತಾರೂಢ ಬಿಜೆಪಿ ಆರೋಪ. ಅಸ್ಸಾಂ ಸರ್ಕಾರದ ವಿರುದ್ಧ ನಿನ್ನೆ ಕಾಂಗ್ರೆಸ್ ಧರಣಿ ಸಹ ನಡೆಸಿದೆ. ರಾಹುಲ್ ಗಾಂಧಿ ಜನಸಮೂಹವನ್ನು ಪ್ರಚೋದಿಸುತ್ತಿದ್ದಾರೆ, ಅವರ ವಿರುದ್ಧ ದೂರು ದಾಖಲಿಸುವಂತೆ ಹಿಮಂತ್ ಬಿಸ್ವಾ, ಅಸ್ಸಾಂ ಪೊಲೀಸರಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ ಉಭಯ ನಾಯಕರು ಎಕ್ಸ್ ಖಾತೆಯಲ್ಲಿ ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಮೂಲಕ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.
Laxmi News 24×7