ಬೆಂಗಳೂರು: ಕಾಂಗ್ರೆಸ್ (congress) ನೇತೃತ್ವದ ಇಂಡಿಯಾ (INDIA) ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ (bengaluru) ಬುಧವಾರ ಮಾತನಾಡಿದ ಅವರು, ಈಗಾಗಲೇ ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳ (west bengal) ಮುಖ್ಯಮಂತ್ರಿ (cm) ಮಮತಾ ಬ್ಯಾನರ್ಜಿ (Mamata Banerjee), ಎನ್‌ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (sharad Pawar), ಬಿಹಾರ (bihar) ಸಿಎಂ ನಿತೀಶ್ ಕುಮಾರ್ (nitish kumar) ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ.
ಹೀಗಾಗಿ ಮುಂದಿನ ದಿನಗಳಲ್ಲಿ ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ ಎಂದರು.
ಕಾಂಗ್ರೆಸ್ ನವರಿಂದ ಬೇಸೆತ್ತು ಅವರು ಇಂಡಿಯಾ ಒಕ್ಕೂಟದಿಂದ ಹೊರಗೆ ಬಂದಿದ್ದಾರೆ. ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಈ ಒಕ್ಕೂಟ ಇರುವುದಿಲ್ಲ ಎಂದು ತಿಳಿಸಿದರು.
ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ಕರ್ನಾಟಕ ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದರು.