Breaking News

ಫೆ. 8ರಂದು ವಿಧಾನಸೌಧದಲ್ಲಿ ರಾಜ್ಯಮಟ್ಟದ ಸಿಎಂ ಜನಸ್ಪಂದನ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ (Janaspandana) ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.

ಅತೀಕ್‌ ಅವರು ಬುಧವಾರ ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು ಅಗತ್ಯ ಸಲಹೆ‌ ಮತ್ತು‌ ಸೂಚನೆಗಳನ್ನು ನೀಡಿದ್ದಾರೆ.‌

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸ್ಪಂದನ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಮುಖ್ಯಮಂತ್ರಿಯವರು ನಡೆಸುತ್ತಿರುವ ಎರಡನೇ ಜನಸ್ಪಂದನ ಕಾರ್ಯಕ್ರಮ ಇದಾಗಿದ್ದು, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ತಿಳಿಸಿದರು. ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ವಿಶೇಷಚೇತನರು, ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡುವಂತೆ ಸೂಚಿಸಿದರು.

ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರ, ಊಟದ ವ್ಯವಸ್ಥೆಗಳನ್ನು ಮಾಡುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ