ಮಂಗಳೂರು: ಮುಂಬರುವ ಲೋಕಸಭೆಯ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮುಖ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಹಾಲಿ ಸಂಸದ ನಳಿನ್ ಕುಮಾರ ಕಟೀಲ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
ನಳಿನ ಕುಮಾರ ಬದಲಿಗೆ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಆದರೆ ಈ ಬಾರಿ ಅವರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯೆತೆ ಇದೆ ಎನ್ನಲಾಗುತ್ತಿದೆ. ಕರಾವಳಿ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘಟನೆ ಕಾರ್ಯಕರ್ತರು ಕಟೀಲ್ ಮೇಲೆ ಒಲವು ಹೊಂದಿಲ್ಲ. ಕಾರ್ಯಕರ್ತರ ಅಭಿಪ್ರಾಯವನ್ನು ಕಡೆಗಣಿಸಿ ಕಟೀಲ್ಗೆ ಟಿಕೆಟ್ ನೀಡಿದರೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಾದ ಬಂಡಾಯದ ಬಿಸಿ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸುವ ಸಾಧ್ಯತೆ ಇದೆ.
 Laxmi News 24×7
Laxmi News 24×7
				 
		 
						
					 
						
					