Breaking News

ಬಿಜೆಪಿ ಜೊತೆ ಹೊಂದಾಣಿಕೆಗೆ ಜನಾರ್ದನ್‌ ರೆಡ್ಡಿ ನಿರ್ಧಾರ

Spread the love

ಬೆಂಗಳೂರು: ಸದ್ಯ ಬಿಜೆಪಿ ಸೇರ್ಪಡೆ ಇಲ್ಲ, ಬದಲಿಗೆ ಪಕ್ಷ ಹೊಂದಾಣಿಕೆಗೆ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ನಿರ್ಧರಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿತ್ತು.

ಈ ವೇಳೆ ಬಿಜೆಪಿ ಜೊತೆ ಹೊಂದಾಣಿಕೆಗೆ ನಾಯಕರು ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ರೆಡ್ಡಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ.

ಬಿಜೆಪಿ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದ ಹಿನ್ನೆಲೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಗೆ ನಿರ್ಧರಿಸಲಾಗಿದೆ. ಮೊನ್ನೇ ಅಷ್ಟೇ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿ ಜನಾರ್ದನ ರೆಡ್ಡಿ ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಇದರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಸುಳಿವು ಸಹ ನೀಡಿದ್ದರು.

ಅಲ್ಲದೇ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಬಹಿರಂಗವಾಗಿ ಹೇಳಿದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ