Breaking News

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

Spread the love

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರು ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು.
ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ನಂತರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಅವರು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡು, ನಂತರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಸಿಬ್ಬಂದಿಗಳೊಂದಿಗೆ ಹಾಗೂ ರೈತರೊಂದಿಗೆ ಹುಟ್ಟು ಹಬ್ಬದ ಆಚರಿಸಿದರು.

ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ ಅಭಿಮಾನಿ ಬಳಗದವರು , ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಸಿಬ್ಬಂದಿಗಳು,ಶ್ರೇಷ್ಠ ಫೌಂಡೇಶನ್ ತಂಡದವರು ಹಾಗೂ ಅನೇಕ ಮುಖಂಡರು, ರೈತರು, ಯುವಕರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ