Breaking News

ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ: ಸಿಎಂ

Spread the love

ಬೆಂಗಳೂರು, : ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ. ಆಮೇಲೆ ಸ್ವೀಕಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರದಿಯಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದರೆ ಸರಿಪಡಿಸುತ್ತೇವೆ. ಜಾತಿಗಣತಿಗೆ ಕಾಂತರಾಜ ಸಮಿತಿ ರಚಿಸಿ ಹಣ ಬಿಡುಗಡೆ ಮಾಡಿದ್ದೆ. ಹೆಚ್​ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾಂತರಾಜ ಸಮಿತಿ ವರದಿ ಸ್ವೀಕರಿಸಲಿಲ್ಲ. ನಾನು ಕಾಂತರಾಜ ಸಮಿತಿ ವರದಿ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಕಾಂತರಾಜ ಸಮಿತಿ ವರದಿ ಅವೈಜ್ಞಾನಿಕವಾಗಿದೆ ಎಂದು ಹೇಳುತ್ತಾರೆ. ಒಂದು ವೇಳೆ ಅವೈಜ್ಞಾನಿಕವಾಗಿದ್ದರೆ ಸಲಹೆ ಪಡೆದು ಸರಿಪಡಿಸುತ್ತೇವೆ ಎಂದಿದ್ದಾರೆ. ಭಾಷಣದ ಮಧ್ಯೆ ಜನರು ಕಾಂತರಾಜ ವರದಿ ಒಪ್ಪಿಕೊಳ್ಳಿ ಅಂತ ಮನವಿ ಮಾಡಿದ್ದು, ಆಗ ಸಿಎಂ ಕೇಳಿದ್ದೇ ಕೇಳ್ಳುತ್ತೀರ. ನಾನು ಹೇಳಿದ್ದೀನಿ, ಸಮಿತಿಯ ವರದಿ ಪಡುತ್ತೇನೆ. ಹಾಡಿದ್ದೇ ಹಾಡು ಕಿಸ್ಬಾಯಿ ದಾಸ ಅಂತ ಕೇಳಿದೆ ಕೇಳ್ತಿಯಲ್ಲಪ್ಪ ಅಂತ ನಗೆ ಚಟಾಕಿ ಸಿಡಿಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ