ಬೆಂಗಳೂರು, : 2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ಆರೋಪ ಹಿನ್ನೆಲೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(nikhil kumaraswamy)ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಇನ್ನು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸಿಜೆ ದಿನೇಶ್ ಕುಮಾರ್, ನ್ಯಾ.ಶಿವಶಂಕರೇಗೌಡ ಅವರಿದ್ದ ಪೀಠ ನೋಟಿಸ್ ನೀಡಿ ಆದೇಶ ಹೊರಡಿಸಿದೆ.