Breaking News

ಹಲವಾರು ಅಕ್ರಮಗಳು ನಡೆಯುತ್ತಿದ್ದರೂ ಕಾನೂನಿನ ಕಣ್ಣು ಕೇವಲ ಹನುಮ ಧ್ವಜದ ಮೇಲೆ ಬಿದ್ದಿದ್ಯಾಕೆ? ಸುಮಲತಾ ಅಂಬರೀಶ್

Spread the love

ಬೆಂಗಳೂರು: ಮಂಡ್ಯದ ಕೆರಗೋಡುನಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದು ಬಹಳ ಸೂಕ್ಷ್ಮ ವಿಷಯವಾಗಿತ್ತು ಆದರೆ ಅದನ್ನು ಸೂಕ್ತವಾಗಿ ನಿರ್ವಹುಸುವಲ್ಲಿ ರಾಜ್ಯಸರ್ಕಾರ (state government) ಪ್ರಮಾದವೆಸಗಿದೆ

ಎಂದುಮಂಡ್ಯ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಹೇಳಿದರು.

 

ನಗರದ ಅವರ ನಿವಾಸದಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿರುವ ಸುಮಲತಾ, ಸರ್ಕಾರ ಕಟ್ಟುನಿಟ್ಟಾಗಿ ಕಾನೂನನ್ನು ಜಾರಿಗೊಳಿಸುತ್ತಿರುವ ಬಗ್ಗೆ ಹೇಳಿಕೊಳ್ಳುತ್ತ್ತಿರುವುದಾದರೆ, ಯಾರ ಭಾವನೆಗಗಳಿಗೂ (sentiments) ಧಕ್ಕೆ ಉಂಟು ಮಾಡದ ಹನುಮ ಧ್ವಜ ಮಾತ್ರ ಅದರ ಕಣ್ಣಿಗೆ ಬಿತ್ತೇ? ಮಂಡ್ಯ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ,

ಅನೇಕ ಕೆರೆಗಳ ಒತ್ತುವರಿಯಾಗಿದೆ, ಇಂಥ ಪ್ರಕರಣಗಳಲ್ಲಿ ಕಾನೂನು ಯಾಕೆ ಸುಮ್ಮನಿದೆ ಅಂತ ಸುಮಮತಾ ಖಾರವಾಗಿ ಪ್ರಶ್ನಿಸಿದರು. ಹನುಮ ಧ್ವಜ ಹಾರಿಸಿದ್ದು ಒಂದು ಸಾರ್ವಜನಿಕ ಸ್ಥಳದಲ್ಲೇ ಹೊರತು ಬೇರೆ ಧರ್ಮದ ಪ್ರಾರ್ಥನಾ ಮಂದಿರದ ಮೇಲಲ್ಲ. ಹಾಗಾಗಿ, ಗ್ರಾಮದ ಜನರೊಂದಿಗೆ ಮಾತಾಡಿ ವಿಷಯವನ್ನು ಸುಲಭವಾಗಿ, ಶಾಂತಿಯುತವಾಗಿ ಬಗೆಹರಿಸಬಹುದಿತ್ತು.

ಅದರೆ 6 ದಿನಗಳ ನಂತರ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಸರ್ಕಾರ ಪ್ರಕರಣಕ್ಕೆ ವಿನಾಕಾರಣ ರಾಜಕೀಯ ಬಣ್ಣವನನ್ನು ಲೇಪಿಸಿತು ಎಂದು ಸುಮಲತಾ ಹೇಳಿದರು


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ