Breaking News

ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

Spread the love

ಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ, ಫೆ.2(ಕರ್ನಾಟಕ ವಾರ್ತೆ): ರಾಯಬಾಗ ತಾಲೂಕಿನ ವಿವಿಧ ಇಲಾಖೆಯ ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಶನಿವಾರ
(ಫೆ.03) ನಂದಿಕುರಳಿ ರಸ್ತೆಯಲ್ಲಿ ಬರುವ ಹೆಸ್ಕಾಂ ವಿಭಾಗೀಯ ಕಚೇರಿಯ ಸಭಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಆದಕಾರಣ ತಾಲೂಕಿನ ಸಾರ್ವಜನಿಕರು ತಮಗೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ರಾಯಬಾಗ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***

Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ