ದಾವಣಗೆರೆ,ಫೆ.3- ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ನೀಡುವುದು ಸ್ವಾಗತಾರ್ಹ. ಆದರೆ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವಾಣಿಯವರಿಗೆ ಪ್ರಶಸ್ತಿ ಕೊಡಲಿ ಪಾಪ, ಬೇಡ ಎಂದು ಹೇಳಿದವರ್ಯಾರು ಎಂದರು.
ತುಮಕೂರಿನ ಸಿದ್ದಗಂಗಾ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡುವಂತೆ ತಾವು ಪತ್ರ ಬರೆದಿದ್ದೆವು ಎಂದು ಸ್ಮರಿಸಿಕೊಂಡರು. ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳ ಬಿಲ್ ಪಾವತಿಸಲು ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ದೂರು ನೀಡಿದರೆ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ಸಮೀಕ್ಷೆ ನಡೆಯುತ್ತಿದೆ ಎಂದು ಹೇಳಿದರು.
Laxmi News 24×7