Breaking News
Home / Uncategorized / ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್ ಸಂಚಾರ……….

ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್ ಸಂಚಾರ……….

Spread the love

ಬೆಂಗಳೂರು: ನೈಟ್ ಕರ್ಫ್ಯೂ ಸಡಿಲ ಮಾಡಿದ ಹಿನ್ನೆಲೆಯಲ್ಲಿ ಇಂದಿನಿಂದ ಬಿಎಂಟಿಸಿ ಬಸ್ ಸಂಚಾರದ ಅವಧಿಯಲ್ಲಿ ಬದಲಾವಣೆಯಾಗಿದೆ.

ಇದುವರೆಗೂ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಇಂದಿನಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್‍ಗಳು ಓಟಾಟ ಮಾಡಲಿವೆ. ಈ ಹಿಂದೆಯೇ ಎಂಡಿ ಶಿಖಾ ಅವರು ಬಸ್ ಸಂಚಾರ ಅವಧಿಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.

ಇಂದಿನಿಂದ ನೈಟ್ ಕರ್ಫ್ಯೂ ಸಮಯ ಕೂಡ ಬದಲಾವಣೆಯಾಗಿದೆ. ರಾತ್ರಿ 9 ಗಂಟೆಯಿಂದ ರಾತ್ರಿ 5 ಗಂಟೆಯವರಗೆ ಮಾತ್ರ ಕರ್ಫ್ಯೂ ಜಾರಿಯಾಗಿದೆ. ಹೀಗಾಗಿ ಬಿಎಂಟಿಸಿ ಬಸ್‍ಗಳ ಸಂಚಾರ ಅವಧಿ ಕೂಡ ಬದಲಾವಣೆಯಾಗಿದೆ. ಈ ಮೂಲಕ ಪ್ರಯಾಣಿಕರು ಹೆಚ್ಚಿನ ಸಂಖ್ಯೆ ಓಡಾಡಬಹುದು.

ಈ ಬಗ್ಗೆ ಬಿಎಂಟಿಸಿ ಎಂಡಿ ಶಿಖಾ, “ಭಾನುವಾರ ಬಿಎಂಟಿಸಿಗೆ ಗೈಡ್ ಲೈನ್ಸ್ ಬಂದಿದೆ. ಹೀಗಾಗಿ ಎಂಚ್‍ಎ ನಿರ್ದೇಶನದಂತೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಬಸ್‍ಗಳನ್ನು ಓಡಿಸುತ್ತೇವೆ” ಎಂದು ಪಬ್ಲಿಕ್ ಟಿವಿ ಸ್ಪಷ್ಟಪಡಿಸಿದ್ದಾರೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಬಸ್‍ಗಳ ಓಡಾಟಕ್ಕೆ ಇನ್ನೂ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ ಕಂಟೈನ್ಮೆಂಟ್ ಝೋನ್ ಏರಿಯಾಗಳಲ್ಲಿ ಬಸ್ ಓಡಾಟವಿಲ್ಲ.


Spread the love

About Laxminews 24x7

Check Also

ಚಿಕ್ಕೋಡಿ. ಅಬ್ಬಬ್ಬಾ ಏನು ಬಿಸಿಲು, ಚಿಕ್ಕೋಡಿ ಉಪವಿಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ಜಾನವಾರುಗಳು ತತ್ತರಿಸಿ ಹೋಗಿವೆ,

Spread the loveಚಿಕ್ಕೋಡಿ. ಅಬ್ಬಬ್ಬಾ ಏನು ಬಿಸಿಲು, ಚಿಕ್ಕೋಡಿ ಉಪವಿಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ಜಾನವಾರುಗಳು ತತ್ತರಿಸಿ ಹೋಗಿವೆ, ಸುಮಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ