ಬೆಳಗಾವಿ, : ಮಂಡ್ಯ ತಾಲೂಕಿನಕೆರಗೋಡು ಗ್ರಾಮದಲ್ಲಿಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ (Belagavi) ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ (MK Hubballi) ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ.
ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಚಲೋ ಎಂಕೆ ಹುಬ್ಬಳ್ಳಿ ಕೈಗೊಂಡಿದ್ದು, ಬಿಜೆಪಿ ನಾಯಕರು, ಹಿಂದೂ ಪರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಇಡೀ ಗ್ರಾಮದಲ್ಲಿ ಭಗವಾ ಧ್ವಜ ಕಟ್ಟುವ ಅಭಿಯಾನವೂ ಕೈಗೊಳ್ಳಲು ಮುಂದಾಗಿದ್ದಾರೆ. ದೊಡ್ಡ ಹನುಮಾನ ಮಂದಿರ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.