ಆರೋಗ್ಯವಾಗಿರಲು ರೋಗ ನಿರೋಧಕ ಶಕ್ತಿ ಹೆಚ್ಚು ಮುಖ್ಯ. ಕೊರೊನಾ ಸಂದರ್ಭದಲ್ಲಿ ವಿಟಮಿನ್ ಸಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ರೋಗದಿಂದ ನಮ್ಮನ್ನು ದೂರವಿಡುತ್ತದೆ. ವಿಟಮಿನ್ ಸಿ ಹೆಚ್ಚಿಸಿಕೊಳ್ಳಲು ನುಗ್ಗೆ ಸೊಪ್ಪಿನ ಎಲೆ ಹಾಗೂ ನೆಲ್ಲಿಕಾಯಿ ಬಹಳ ಪ್ರಯೋಜನಕಾರಿ.
ಇವೆರಡರ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಇದು ನೈಸರ್ಗಿಕ ರೀತಿಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ನೆಲ್ಲಿಕಾಯಿಯನ್ನು ನಿಯಮಿತವಾಗಿ ತಿನ್ನುವುದು ಬಹಳ ಪ್ರಯೋಜನಕಾರಿ. ಇದು ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ನೆಲ್ಲಿಕಾಯಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ವಿಟಮಿನ್ ಬಿ ಕಾಂಪ್ಲೆಕ್ಸ್, ಪ್ರೋಟೀನ್ ಗಳಿವೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ, ನೆಲ್ಲಿಕಾಯಿ ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ದೇಹದಲ್ಲಿ ಸಂಗ್ರಹವಾಗಿರುವ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.