Breaking News

ಕಾಂಗ್ರೆಸ್​ ತೊರೆದು ವಾಪಸ್ ಬಿಜೆಪಿ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ!

Spread the love

ದಾವಣಗೆರೆ, : ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮತ್ತೆ ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧವಾಗಿದೆ. ಲೋಕಾಯುಕ್ತ ಬಲೆಗೆ ಬಿದ್ದು ಪಕ್ಷದಿಂದ ಉಚ್ಛಾಟನೆಗೊಂಡಿರುವ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಅವರು ನಾಳೆ ಅಂದರೆ ಫೆಬ್ರವರಿ 07ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್​​ ಮಾಜಿ ಶಾಸಕ ಎಚ್. ಪಿ. ರಾಜೇಶ್ ಬಿಜೆಪಿಯತ್ತ ಮುಖ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ಪರಿಶಿಷ್ಟ ಪಂಗಡ ಮೀಸಲು‌ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ಎಚ್. ಪಿ. ರಾಜೇಶ್ ಅವರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ. ಆದ್ರೆ, ಯಾವಾಗ ಸೇರ್ಪಡೆ ಎಂದು ದಿನಾಂಕ ನಿಗದಿಯಾಗಿಲ್ಲ. ಎಚ್.ಪಿ.ರಾಜೇಶ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋಲು ಕಂಡಿದ್ದರು.

ರೇಷ್ಮೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಆಗಿದ್ದ ಎಚ್ ಪಿ ರಾಜೇಶ್, 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ 2018ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಆದ್ರೆ, 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳಿಂದ ಪರಭಾವಗೊಂಡಿದ್ದರು. ಇದೀಗ ಮತ್ತೆ ಕಾಂಗ್ರೆಸ್​ ತೊರೆದು ಕೇಸರಿ ಪಾಳೆಯ ಸೇರಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ