Breaking News

ಬಿಜೆಪಿ ವರಿಷ್ಠರನ್ನ​ ಭೇಟಿಯಾದ ಸುಮಲತಾ

Spread the love

ನವದೆಹಲಿ/ಮಂಡ್ಯ, (ಫೆಬ್ರವರಿ 08): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದು, ಕರ್ನಾಟಕದಲ್ಲಿ ರಾಜಕೀಯ (Karnataka Politics) ಚಟುವಟಿಕೆಗಳು ಬಿರುಸುಗೊಂಡಿವೆ.

ಈ ಬಾರಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ ಹಾಗೂ ಬಿಜೆಪಿ ಸೀಟು ಹಂಚಿಕೆ ಸಂಬಂಧ ಚರ್ಚೆ ನಡೆಸಿವೆ. ಇದರ ಮಧ್ಯೆ ಈ ಬಾರಿಯೂ ಸಹ ಮಂಡ್ಯ(Mandya) ರಾಜಕಾರಣ ಮುನ್ನೆಲೆಗೆ ಬಂದಿದೆ. ಮಂಡ್ಯವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳುವಂತೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಗಿಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಇಂದು(ಫೆ.08) ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಈ ವೇಳೆ ಮಂಡ್ಯ ಕ್ಷೇತ್ರವನ್ನ ಉಳಿಸಿಕೊಂಡು ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

‘ಬಿ’ ಖಾತಾ ನಿವೇಶನ, ಕಟ್ಟಡಗಳಿಗೆ ‘ಎ’ ಖಾತಾ ಭಾಗ್ಯ: ಯಾರಿಗೆಲ್ಲ ಪ್ರಯೋಜನ, ಷರತ್ತುಗಳೇನು?

Spread the love ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ನಿವಾಸಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.‌ ‘ಬಿ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ