Breaking News

ರಾಮನಿಗಿಂತ ಮುಂಚೆ ವಾಲ್ಮೀಕಿ ಮಂದಿರ ನಿರ್ಮಿಸಬೇಕಿತ್ತು: ಕೆ ಎನ್ ರಾಜಣ್ಣ

Spread the love

ದಾವಣಗೆರೆ: ‘ಶ್ರೀರಾಮನಿಗೆ ಜಗತ್ತಿನ ಬಗ್ಗೆ ತಿಳಿಸಿದ್ದೇ ವಾಲ್ಮೀಕಿ. ರಾಮಮಂದಿರಕ್ಕೂ ಮೊದಲು ವಾಲ್ಮೀಕಿ ಮಂದಿರ ಕಟ್ಟಬೇಕಿತ್ತು’ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ(K. N. Rajanna) ಹೇಳಿದ್ದಾರೆ.

ಈ ಬಗ್ಗೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 100 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲಾಗುತ್ತಿದೆ.

ಅಲ್ಲದೇ ಮೂವರು ವಾಲ್ಮೀಕಿ ಸಮುದಾಯದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ರಾಜಣ್ಣ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಇಲಾಖೆ ಸಚಿವ ಡಾ ಜಿ ಪರಮೇಶ್ವರ್, ವಾಲ್ಮೀಕಿ ವಿಶ್ವವಿದ್ಯಾಲಯ ರಾಜ್ಯದಲ್ಲಿ ನಿರ್ಮಾಣವಾಗಬೇಕು. ಈ ಬಾರಿ ಬಜೆಟ್​ನಲ್ಲಿ ಈ ಬಗ್ಗೆ ಘೋಷಿಸಬೇಕು. ಸಿಎಂ ಸಿದ್ದರಾಮಯ್ಯ ಬಿಟ್ಟರೆ ಬೇರೆ ಯಾರೂ ಇದನ್ನು ಮಾಡಲ್ಲ ಎಂದರು.

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ರಾಜಕೀಯ ನಾಯಕರು ಒಂದಿಲ್ಲೊಂದು ಹೇಳಿಕೆಯನ್ನು ಕೊಡುತ್ತಲ್ಲೇ ಇದ್ದಾರೆ. ಈ ಹಿಂದೆ ಗೊಂಬೆ ಎಂಬ ಹೇಳಿಕೆ ಕೊಟ್ಟಿದ್ದ ಸಹಕಾರ ಸಚಿವ ಕೆ.ಎನ್​.ರಾಜಣ್ಣ ಇದೀಗ ಈ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ