ಹುಬ್ಬಳ್ಳಿ, (ಫೆಬ್ರವರಿ 09): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Loksabha Elections 2024) ರಾಜಕೀಯ ಗರಿಗೆದರಿದ್ದು, ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ (BJP And JDS Alliance) ಮಾಡಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಕಾಡೆ ಮಲಗಿಸುವ ತಂತ್ರರೂಪಿಸುತ್ತಿವೆ. ಆದ್ರೆ, ಜೆಡಿಎಸ್ಗೆ ಯಾವೆಲ್ಲಾ ಕ್ಷೇತ್ರ ಎನ್ನುವ ಬಗ್ಗೆ ಇನ್ನೂ ಅಂತಿಮವಾಗಿಲ್ಲ.
ಇದರ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ(HD Kumaraswamy) ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಜಿಟಿ ದೇವೇಗೌಡ(GT Devegowda) ಸುಳಿವು ನೀಡಿದ್ದಾರೆ. ಇದರೊಂದಿಗೆ ಕುಮಾರಸ್ವಾಮಿ ಈ ಬಾರಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇಂದ್ರದ ಮಂತ್ರಿಯಾಗುತ್ತಾರೆ ಎಂಬ ಚರ್ಚೆಗಳಿಗೆ ರೆಕ್ಕೆಪುಕ್ಕಗಳು ಬಂದಂತಾಗಿವೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿ ದೇವೇಗೌಡ, ದೇವೇಗೌಡರ ಕುಟುಂಬದಿಂದ ಇಬ್ಬರು ಅಭ್ಯರ್ಥಿಗಳು ಆಗಬಹುದು. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಇಬ್ಬರು ಅಭ್ಯರ್ಥಿಗಳಾಗಬಹದು. ಇನ್ನು ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಹೇಳಿದರು. ಈ ಮೂಲಕ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ, ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವುದು ಖಚಿತವಾದಂತಾಗಿದೆ. ಇನ್ನು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎನ್ನುವ ಅಂತೆ-ಕಂತೆಗಳಿಗೆ ತೆರೆ ಬಿದ್ದಿದೆ.